August 7, 2026
0004

ಹಿರಿಯೂರು :

ತಾಲ್ಲೂಕಿನ ಮಸ್ಕಲ್ ಗ್ರಾಮದ ಗ್ರಾಮದೇವತೆ ಶ್ರೀಕರಿಯಮ್ಮದೇವಿಯ ಜಾತ್ರಾ ಮಹೋತ್ಸವದಲ್ಲಿ ಮಾಜಿ ಸಚಿವರಾದ ಡಿ.ಸುಧಾಕರ್ ರವರ ಪುತ್ರ ಸುಹಾಸ್ ಸುಧಾಕರ್ ರವರು ಭಾಗವಹಿಸಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು,ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ, ಮತ್ತು ಆರೋಗ್ಯ ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ಜೋಗಪ್ಪ, ಸೇರಿದಂತೆ ಪಕ್ಷದ ಕಾರ್ಯಕರ್ತರು, ಹಾಗೂ ಮಸ್ಕಲ್ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *