
ಹಿರಿಯೂರು :
ಕರ್ನಾಟಕ ಸರ್ಕಾರದ ಮಾನ್ಯ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವರಾದ ಸನ್ಮಾನ್ಯ ಟಿ.ರಘುಮೂರ್ತಿ ಹಾಗೂ ಶಾಸಕರಾದ ಸನ್ಮಾನ್ಯ ಕೆ.ಸಿ.ವೀರೇಂದ್ರಪಪ್ಪಿರವರೊಂದಿಗೆ, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾನಿಗೊಳಗಾದ ಪ್ರದೇಶಗಳ ಪರಿಸ್ಥಿತಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ತುರ್ತು ಪರಿಹಾರ ಕಾರ್ಯಗಳ ಕುರಿತು ಸ್ಥಳೀಯರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಪರಿಹಾರ ಹಾಗೂ ನೆರವು ಶೀಘ್ರವಾಗಿ ತಲುಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸುಹಾಸ್ ಸುಧಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
