
ಹಿರಿಯೂರು :
ವಾರ್ಡ್‌ನ ಜನತೆ ತೋರಿದ ಪ್ರೀತಿ, ವಿಶ್ವಾಸ ಹಾಗೂ ಆತ್ಮೀಯ ಸ್ವಾಗತ ನನ್ನ ಜನಸೇವೆಯ ಪಯಣಕ್ಕೆ ಮತ್ತಷ್ಟು ಶಕ್ತಿ ತುಂಬಿದೆ ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.
ನಗರದ ವಾರ್ಡ್ ಸಂಖ್ಯೆ 22ರಲ್ಲಿ ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ವಾರ್ಡ್‌ನ ಸ್ಥಳೀಯ ಸಮಸ್ಯೆಗಳು, ಸಾರ್ವಜನಿಕರ ಅಗತ್ಯಗಳು, ಸಲಹೆಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಆಶೋತ್ತರಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುವ ಸಂಕಲ್ಪ ನನ್ನದಾಗಿದೆ ಮುಂದಿನ ದಿನಗಳಲ್ಲಿಯೂ ನಿಮ್ಮೆಲ್ಲರ ಸಹಕಾರ, ಮಾರ್ಗದರ್ಶನ ಹಾಗೂ ಆಶೀರ್ವಾದ ಸದಾ ನನ್ನೊಂದಿಗಿರಲಿ ಎಂಬುದಾಗಿ ಹೇಳಿದರು.
