September 13, 2026
004

ಹಿರಿಯೂರು :

ಗ್ರಾಮದ ಯುವಕರು ಒಗ್ಗಟ್ಟಿನಿಂದ ಸಮಾಜಮುಖಿ ಚಿಂತನೆ ಹಾಗೂ ಸೇವಾ ಮನೋಭಾವದೊಂದಿಗೆ ಸಂಘಟಿತರಾಗಿರುವುದು ಸಂತಸದ ಸಂಗತಿ. ಯುವಶಕ್ತಿಯೇ ಸಮಾಜದ ಶಕ್ತಿ; ಯುವಕರ ಕ್ರಿಯಾಶೀಲತೆ ಮತ್ತು ಉತ್ತಮ ಕಾರ್ಯಗಳು ಗ್ರಾಮದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿ ಎಂಬುದಾಗಿ ಸುಹಾಸ್ ಸುಧಾಕರ್ ಶುಭ ಹಾರೈಸಿದರು.

ತಾಲ್ಲೂಕಿನ ಭರಂಪುರ ಗ್ರಾಮದಲ್ಲಿ ಭರಂಪುರ ಯುವಶಕ್ತಿ ಸಂಘ ವತಿಯಿಂದ ಆಯೋಜಿಸಲಾಗಿದ್ದ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಭರಂಪುರ ಯುವಶಕ್ತಿ ಸಂಘವು ಮುಂದಿನ ದಿನಗಳಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಜನಪರ ಕಾರ್ಯಗಳ ಮೂಲಕ ಉತ್ತಮ ಸೇವೆ ಸಲ್ಲಿಸಲಿ ಎಂಬುದಾಗಿ ಶುಭಕೋರಿದರು.

ಇದೇ ಸಂದರ್ಭದಲ್ಲಿ ಸುಹಾಸ್ ಸುಧಾಕರ್ ರವರಿಗೆ ಗ್ರಾಮಸ್ಥರು ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ಗ್ರಾಮದ ಹಿರಿಯರು, ಮುಖಂಡರು ಹಾಗೂ ಯುವಮಿತ್ರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *