
ಹಿರಿಯೂರು :
ನೂರಾರು ವರ್ಷಗಳು ಬ್ರಿಟೀಷರ ದಾಸ್ಯದಲ್ಲಿದ್ದ ನಮ್ಮ ಭಾರತ ದೇಶ ಹಲವಾರು ದೇಶಪ್ರೇಮಿಗಳು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ಸ್ವಾತಂತ್ರ್ಯ ಪಡೆದಿದ್ದು, ಲಕ್ಷಾಂತರ ಸ್ವಾತಂತ್ರ್ಯಹೋರಾಟಗಾರರ ಹೋರಾಟದಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಹೋಗುವ ಗುರುತರ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂಬುದಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಆಲೂರು ಹನುಮಂತರಾಯಪ್ಪ ಹೇಳಿದರು.

ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.

ಈ ದೇಶದ ಭಾವೀ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಸಮಾಜದ ಎಲ್ಲಾ ವರ್ಗದ ಜನರ ಜೊತೆಗೆ ಜಾತ್ಯಾತೀತ ಮನೋಭಾವದಿಂದ ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳುವ ಮೂಲಕ ಈ ದೇಶವನ್ನು ಉತ್ತಮ ಬಲಿಷ್ಠ, ಸದೃಢ ರಾಷ್ಟ್ರವಾಗಿ ಕಟ್ಟುವ ಜೊತೆಗೆ ಈ ರಾಷ್ಟ್ರವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸಬೇಕು ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಪಿ.ಆರ್.ಸತೀಶ್ ಬಾಬು, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ, ವಿದ್ಯಾಸಂಸ್ಥೆಯ ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಆಡಳಿತಾಧಿಕಾರಿ ಶ್ರೀಮತಿಹೇಮಲತಾ, ಶಿಕ್ಷಕರಾದ ಉಮೇಶ್ ಯಾದವ್, ಶಿಕ್ಷಕಿಯರುಗಳಾದ ಶ್ರೀಮತಿ ರಜಿಯಾಬೇಗಂ, ಶ್ರೀಮತಿ ಗಂಗಮ್ಮ, ಶ್ರೀಮತಿರಂಜಿತಾ, ಶ್ರೀಮತಿ ಸಬೀಹಾ, ಶ್ರೀಮತಿ ಸಾದಿಕಾ, ಶ್ರೀಮತಿ ಮಮತಾ, ಶ್ರೀಮತಿ ಸುಲೋಚನಾ, ಶ್ರೀಮತಿ ಅಕ್ಷಿತಾ, ಶ್ರೀಮತಿ ಗೌತಮಿ, ಪೂಜಾ, ಖುಷಿಕುಮಾರಿ, ಅಫ್ರೀನ್, ಸಿರ್ಮಾನ್, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಭಾಗ್ಯ, ಶ್ರೀಮತಿ ಜಯಸುಧಾ, ಸುರೇಶ್, ಸೇರಿದಂತೆ ಶಾಲಾಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
