
ಹಿರಿಯೂರು :
ಶ್ರೀಭಗೀರಥ ಗ್ರಾಮೀಣಾಭಿವೃದ್ಧಿ, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವು ಗ್ರಾಮೀಣಾಭಿವೃದ್ಧಿ, ಯುವಜನರ ಕ್ರೀಡಾ ಚಟುವಟಿಕೆಗಳು ಹಾಗೂ ನಮ್ಮ ನಾಡಿನ ಕಲೆ–ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗೆ ಉತ್ತಮ ಕೊಡುಗೆ ನೀಡುವಂತಾಗಲಿ ಎಂಬುದಾಗಿ ಸುಹಾಸ್ ಸುಧಾಕರ್ ಶುಭ ಹಾರೈಸಿದರು.
ತಾಲ್ಲೂಕಿನ ಅಂಬಲಗೆರೆ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಭಗೀರಥ ಗ್ರಾಮೀಣಾಭಿವೃದ್ಧಿ, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಿ, ನಂತರ ಮಾತನಾಡಿದರು.ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
