
ಹಿರಿಯೂರು :
ನಮ್ಮ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳು ದಾನಿಗಳ ನೆರವಿನಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ವಾರದ 6 ದಿನಗಳು ತಪ್ಪದೇ ಉಚಿತ ಆಹಾರ ವಿತರಣೆ ಮಾಡಲಾಗುತ್ತಿದ್ದು, ಆಸ್ಪತ್ರೆಗೆ ಬರುವ ನೂರಾರು ರೋಗಿಗಳಿಗೆ ಇದರಿಂದ ಅನುಕೂಲವಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಉಚಿತ ಆಹಾರ ವಿತರಣೆ ಮಾಡಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಸೇರಿದಂತೆ ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
