September 13, 2026
778950296_1820448162612500_7371979848098598782_n

ಹಿರಿಯೂರು :

ಮಾಜಿ ಶಿಕ್ಷಣ ಸಚಿವರು ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ.ನಾಗೇಶ್ [67] ಅವರು ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಮಗಳ ಮನೆಯಲ್ಲಿ  ನಿಧನರಾಗಿದ್ದಾರೆ. ಬಿ.ಸಿ.ನಾಗೇಶ್ ರವರ ನಿಧನಕ್ಕೆ ಹಿರಿಯೂರುನ್ಯೂಸ್ ತಂಡದಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

ಮಾಜಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ರವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬವರ್ಗದವರಿಗೆ ಕರುಣಿಸಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಸಂತಾಪ ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *