
ಹಿರಿಯೂರು :
ನಗರದ ಪ್ರಧಾನ ರಸ್ತೆಯಲ್ಲಿರುವ ಗುರುಭವನದಲ್ಲಿ ಇದೇ ಆಗಸ್ಟ್ 23ರ ಭಾನುವಾರ ಬೆಳಗ್ಗೆ 11 ಗಂಟೆಗೆ ವಾಲ್ಮೀಕಿ ಸಮಾಜ ಮತ್ತು ಟಿ.ರಘುಮೂರ್ತಿ ಅಭಿಮಾನಿ ಬಳಗದ ವತಿಯಿಂದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಟಿ.ರಘುಮೂರ್ತಿ ಅವರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂಬುದಾಗಿ ಕಾರ್ಯಕ್ರಮ ಸಂಯೋಜಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಟಿ.ರಘುಮೂರ್ತಿ ಅಭಿಮಾನಿ ಬಳಗದ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಾರ್ಯಕ್ರಮ ಸಂಯೋಜಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
