
ಹಿರಿಯೂರು :
ತಾಲ್ಲೂಕಿನ ಜನರ ಸಹಕಾರ, ಒಗ್ಗಟ್ಟು ಮತ್ತು ವಿಶ್ವಾಸದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಜನಪರವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ನನ್ನದಾಗಿದೆ ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.
ತಾಲೂಕಿನ ಸೂರಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ.ಎನ್.ಮಾಳಿಗೆ ಗ್ರಾಮದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಸ್ಥಳೀಯ ಸಮಸ್ಯೆಗಳು, ಸಾರ್ವಜನಿಕರ ಅಗತ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.
