
ಹಿರಿಯೂರು :
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಜವಾಹರ್ ಬಾಲ್ ಮಂಚ್ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಹಿರಿಯೂರಿನ ಕಾಂಗ್ರೆಸ್ ಯುವ ಮುಖಂಡ ಜಿ.ದಾದಾಪೀರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್ ಅವರ ಶಿಫಾರಸ್ಸಿನ ಮೇರೆಗೆ ಜವಾಹರ್ ಬಾಲ್ ಮಂಚ್ ರಾಜ್ಯಾಧ್ಯಕ್ಷರಾದ ಹೆಚ್.ಜೆ.ಮೈನುದ್ದೀನ್ ಅವರು ಈ ನೇಮಕಾತಿ ಆದೇಶವನ್ನು ನೀಡಿದ್ದಾರೆ.
