
ಹಿರಿಯೂರು :
ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀಮತಿ ಎಸ್.ರಮ್ಯಾ ಅವರನ್ನು ಚಿತ್ರದುರ್ಗ ಜಿಲ್ಲಾ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ವತಿಯಿಂದ ಭೇಟಿಯಾಗಿ ಶುಭಕೋರಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಸಮಿತಿಯ ಪ್ರಮುಖ ಪದಾಧಿಕಾರಿಗಳು ನೂತನ ಜಿಲ್ಲಾಧಿಕಾರಿಗಳಾದ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀಮತಿ ಎಸ್.ರಮ್ಯಾರವರಿಗೆ ಅಭಿನಂದಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ.ರಾಮಚಂದ್ರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಾಘವೇಂದ್ರ, ಮಧ್ಯ ಕರ್ನಾಟಕ ವಿಭಾಗೀಯ ಅಧ್ಯಕ್ಷರಾದ ಬಸವರಾಜ್ ಕುರುಬರಹಳ್ಳಿ, ರಾಜ್ಯ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ರೇವಣ್ಣ ಸಿದ್ದಪ್ಪ ಬಿ ಕಲ್ಕುಂಟೆ, ಹಿರಿಯೂರು ತಾಲೂಕು ಅಧ್ಯಕ್ಷರಾದ ಕೆ.ಓಂಕಾರಪ್ಪ ದೊಡ್ಡಘಟ್ಟ, ಜಿಲ್ಲಾ ಉಪಾಧ್ಯಕ್ಷರಾದ ನಿರಂಜನ್, ಯುವಮುಖಂಡರಾದ ಅಶೋಕ್ ಜೋಗಿಮಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
