
ಹಿರಿಯೂರು :
ಜಿಲ್ಲೆಯ ಪ್ರಗತಿಪರ ರೈತರಾಗಿ ಕೃಷಿ ಕ್ಷೇತ್ರದಲ್ಲಿ ಹೊಸಹೊಸ ಅವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತ್ಯುತ್ತಮ ಕೃಷಿಕರಾಗಿ ಹೊರಹೊಮ್ಮುವ ಜೊತೆಗೆ ಇತರೆ ಕೃಷಿಕರಿಗೆ ಮಾರ್ಗದರ್ಶಕರಾಗಿ ಸಲಹೆ-ಸೂಚನೆಗಳನ್ನು ನೀಡುತ್ತಾ ಕೃಷಿ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇವರು ಕೇಂದ್ರ ಸರ್ಕಾರದ “ರೋಲ್ ಮಾಡೆಲ್ ಫಾಮರ್ ಪ್ರಶಸ್ತಿ” ಹಾಗು ರಾಜ್ಯ ಸರ್ಕಾರದ ಕೃಷಿ ಪಂಡಿತ್ ಆವಾರ್ಡ್, ರಾಜ್ಯ ಅರಣ್ಯ ಇಲಾಖೆಯಿಂದ ರಾಜ್ಯ ಪರಿಸರ ಪ್ರಶಸ್ತಿ, ಶ್ರೀಗಂಧ ಪ್ರಶಸ್ತಿ, ರಾಜ್ಯಮಟ್ಟದ ಎಂ.ಹೆಚ್.ಮರಿಗೌಡ ಅತ್ಯುತ್ತಮ ತೋಟಗಾರಿಕೆ ರೈತ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಿಂದ ವಿವಿಧ ಪ್ರಶಸ್ತಿಗಳನ್ನು ಪಡೆದಿರುವ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಶ್ರೀಯುತ ಬಿ.ಎಸ್. ರಘುನಾಥ್ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆಗಿರುವ ಶ್ರೀಯುತ ಬಿಎಸ್.ರಘುನಾಥ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ, ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
