September 17, 2026
000002

ಹಿರಿಯೂರು :

ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘವು 25 ವರ್ಷಗಳನ್ನು ಪೂರೈಸಿದ್ದು, ಅದರ ಸವಿನೆನಪಿಗಾಗಿ ನಗರದ ತುಳಸಿ ಕಲ್ಯಾಣ ಮಂಟಪದಲ್ಲಿ ಇದೇ ಸಪ್ಟೆಂಬರ್ 22ರಂದು ನಡೆಯುವ ನಮ್ಮ ಸಹಕಾರಿ ಸಂಘದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ತಾವು ಆಗಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬಿ.ಎನ್.ತಿಪ್ಪೇಸ್ವಾಮಿ ಮನವಿ ಮಾಡಿದರು.

ನಗರದ ವಾಣಿವಿಲಾಸ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ[ರಿ]ಗೆ ಭೇಟಿ ನೀಡಿ, ಸೊಸೈಟಿಯ ಅಧ್ಯಕ್ಷರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಶ್ರೀಯುತ ಆಲೂರುಹನುಮಂತರಾಯಪ್ಪರವರಿಗೆ ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘದ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ನೀಡಿ, ಆಹ್ವಾನಿಸಿ, ಶಾಲು ಹೊದಿಸಿ, ಸನ್ಮಾನಿಸಿ,ಗೌರವಿಸಿ, ನಂತರ ಅವರು ಮಾತನಾಡಿದರು.  

ಈ ಸಂದರ್ಭದಲ್ಲಿ ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬಿ.ಎನ್.ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಎಸ್.ಹರ್ಷ, ವಾಸವಿ ಯುವಜನಸಂಘದ ಅಧ್ಯಕ್ಷರಾದ ವಿ.ಜಗದೀಶ್, ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕರಾದ ರಾಮಕೃಷ್ಣ, ವಾಣಿವಿಲಾಸ ಪತ್ತಿನ ಸಹಕಾರ ಸಂಘದ ಶಿವರಾಜ್ ನಾಯಕ್, ವಾಣಿವಿಲಾಸ ವಿದ್ಯಾಸಂಸ್ಥೆಯ ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಕೋ-ಆರ್ಡಿನೇಟರ್ ಶ್ರೀಮತಿ ಭಾಗ್ಯ ಇತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *