
ಹಿರಿಯೂರು :
ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘವು 1999ರಲ್ಲಿ ಪ್ರಾರಂಭಗೊಂಡು 2025ಕ್ಕೆ 25 ವರ್ಷಗಳನ್ನು ಪೂರೈಸಿರುತ್ತದೆ, ಈ ಸಂದರ್ಭದಲ್ಲಿ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ಧರಿಸಲಾಗಿದೆ ಎಂಬುದಾಗಿ ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬಿ.ಎನ್.ತಿಪ್ಪೇಸ್ವಾಮಿ ಹೇಳಿದರು.
ನಗರದ ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘದ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ, ಅವರು ಮಾತನಾಡಿದರು.

ಇದೇ ಸಪ್ಟೆಂಬರ್ 21ರ ಸೋಮವಾರದಂದು ಬೆಳಗ್ಗೆ 9:30ಕ್ಕೆ ಸಹಕಾರಿಯ ನವೀಕೃತ ನೂತನ ಕಟ್ಟಡದ ಉದ್ಘಾಟನೆ ಹಾಗೂ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮವಿರುತ್ತದೆ, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಆರ್ಯವೈಶ್ಯ ನಿಗಮ ಮಂಡಳಿ ಅಧ್ಯಕ್ಷರಾದ ಕೆ.ವಿ.ರಾಮ್ ಪ್ರಸಾದ್ ನೂತನ ಸಭಾ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ,
ಇದೇ ಸಂದರ್ಭದಲ್ಲಿ “ಸಂಗ್ರಹಣಾ ಕೊಠಡಿ” ಮತ್ತು “ಸಮೃದ್ಧಿ ಸಭಾಂಗಣ”ದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಡಾ.ಟಿ.ಎ.ಶರವಣ ನೆರವೇರಿಸಲಿದ್ದಾರೆ, “ಭದ್ರತಾ ಕೊಠಡಿ”ಗಳ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಕುಮಾರ್ ಶಿವಮೊಗ್ಗ ಇವರು ಉದ್ಘಾಟಿಸಲಿದ್ದಾರೆ.

ಹಾಗೂ 22ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ನಗರದ ಹುಳಿಯಾರು ರಸ್ತೆಯಲ್ಲಿರುವ ತುಳಸಿ ಕಲ್ಯಾಣ ಮಂಟಪದಲ್ಲಿ ಈ ಸಹಕಾರಿ ಸಂಘದ “ರಜತಮಹೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದ ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ರಘುಮೂರ್ತಿಯವರು ಉದ್ಘಾಟಿಸಲಿದ್ದಾರೆ,
ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಚಿತ್ರದುರ್ಗ ಜಿಲ್ಲೆಯ ಸಂಸದರಾದ ಗೋವಿಂದ ಕಾರಜೋಳ, ಕರ್ನಾಟಕ ಆರ್ಯವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷರಾದ ಆರ್.ಪಿ.ರವಿಶಂಕರ್, ಕರ್ನಾಟಕ ರಾಜ್ಯ ಸೌಹಾರ್ಧ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜೇಗೌಡ, ಹಾಗೂ ರಾಜ್ಯ ಸೌಹಾರ್ಧ ಸಹಕಾರಿ ನಿರ್ದೇಶಕರಾದ ರಘುರಾಮರೆಡ್ಡಿ, ಜಿಲ್ಲಾ ಸೌಹಾರ್ಧ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಡಿ.ಆರ್.ತಿಪ್ಪೇಸ್ವಾಮಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಹಕಾರದ ಹಾದಿಯಲ್ಲಿ ಅಭೂತಪೂರ್ವ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸಿರುವ ರಜತ ಮಹೋತ್ಸವದ ಅಂಗವಾಗಿ ನಮ್ಮ ಸೌಹಾರ್ಧ ಸಹಕಾರಿಯ ಸದಸ್ಯರುಗಳ ಮಕ್ಕಳಾದ ವೈದ್ಯರು, ಚಾರ್ಟೆಡ್ ಅಕೌಂಟೆಂಟ್ ಹಾಗೂ ಸರ್ಕಾರಿ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಷೇರು ಸದಸ್ಯರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಗುವುದು ಎಂಬುದಾಗಿ ಹೇಳಿದರು.

ಈ ಎಲ್ಲಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕನ್ಯಕಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಬಿ.ಎನ್.ತಿಪ್ಪೇಸ್ವಾಮಿಯವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷರಾದ ಎಸ್.ಹರ್ಷ, ರಾಜ್ಯ ಆರ್ಯವೈಶ್ಯ ವಿದ್ಯಾಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಕೆ.ವಿ.ಅಮರೇಶ್, ಹಿರಿಯೂರು ಆರ್ಯವೈಶ್ಯ ಮಂಡಳಿ ಗೌ.ಅಧ್ಯಕ್ಷರಾದ ಎಲ್.ಆನಂದಶೆಟ್ಟಿ, ಅಧ್ಯಕ್ಷರಾದ ಕೆ.ವಿ.ಸತ್ಯನಾರಾಯಣ, ಸೌಹಾರ್ಧ ಸಹಕಾರಿಯ ಸಲಹಾ ಸಮಿತಿ ಸದಸ್ಯರಾದ ಆರ್.ಪ್ರಕಾಶ್ ಕುಮಾರ್, ನಗರದ ವಾಸವಿ ಯುವಜನ ಸಂಘದ ಅಧ್ಯಕ್ಷರಾದ ವಿ.ಜಗದೀಶ್, ಸೇರಿದಂತೆ ಸೌಹಾರ್ಧ ಸಹಕಾರಿಯ ಎಲ್ಲಾ ಆಡಳಿತ ಮಂಡಳಿ ನಿರ್ಧೇಶಕರು, ಸಲಹಾ ಸಮಿತಿ ಸದಸ್ಯರು, ಸೌಹಾರ್ಧ ಸಹಕಾರಿಯ ಗ್ರಾಹಕರು ಕಾರ್ಯಕ್ರಮಗಳಿಗೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.
