October 6, 2026
006

ಹಿರಿಯೂರು :

ತಾಲೂಕು ಕ್ರೀಡಾಂಗಣದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ  14 ವರ್ಷ ವಯೋಮಿತಿಯ ಕಸಬಾ ಹೋಬಳಿ ಮಟ್ಟದ  ಕ್ರೀಡಾಕೂಟದಲ್ಲಿ ನಗರದ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿನಿ ಶ್ರದ್ಧಾ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ಪ್ರಥಮ, ಹರ್ಡಲ್ಸ್ ಓಟದಲ್ಲಿ ದ್ವಿತೀಯ ಸ್ಥಾನ, ಪಡೆದು ಓಟದ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.

ವಿದ್ಯಾರ್ಥಿನಿ ಶ್ರದ್ಧಾಳನ್ನು ಪ್ರೆಸಿಡೆನ್ಸಿ ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಾಲಾ ಮುಖ್ಯ ಶಿಕ್ಷಕರು, ಹಾಗೂ ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ. ಮುಂದಿನ ಕ್ರೀಡಾಕೂಟಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂಬುದಾಗಿ ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *