
ಹಿರಿಯೂರು :
ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂಬ ರಾಜ್ಯ ಸರ್ಕಾರದ ಆದೇಶ ನಿಜಕ್ಕೂ ಖಂಡನೀಯ ಎಂಬುದಾಗಿ ಬಿಜೆಪಿ ಯುವಮುಖಂಡರಾದ ಎನ್.ಧನಂಜಯ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಂದೇ ಮಾತರಂ ಕೇವಲ ಒಂದು ಗೀತೆಯಲ್ಲ ಕೋಟ್ಯಂತರ ಭಾರತೀಯರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹೊತ್ತಿಸಿದ ಗೀತೆ, ಜನರಲ್ಲಿ ದೇಶಭಕ್ತಿಯನ್ನು ಮೂಡಿಸುವ ಗೀತೆ, ಎಲ್ಲಾ ಚರಣಗಳನ್ನು ಹಾಡುವಂತೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ, ಆದರೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರು ಎರಡು ಚರಣಗಳನ್ನು ಮಾತ್ರ ಹಾಡಲು ಆದೇಶ ನೀಡಿದ್ದಾರೆ
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಓಲೈಕೆ ರಾಜಕಾರಣ ಮಾಡಿದ್ದಾರೆ, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಇತ್ತೀಚೆಗೆ ತಾವೇ ವಂದೇ ಮಾತರಂ ಗೀತೆಗೆ ಗೌರವ ನೀಡಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ, ಅವರಿಂದ ಪಾಠ ಕಲಿತುಕೊಳ್ಳಲಿ, ಈ ಕೂಡಲೇ ಒಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿದ ನಿರ್ಧಾರವನ್ನು ವಾಪಾಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
