October 6, 2025
005

ಹಿರಿಯೂರು:              

ದೇಶದ ಆರ್ಥಿಕ ಅಭಿವೃದ್ಧಿಯು ದೇಶದ ಸಾರಿಗೆ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದ್ದು, ಸಾರಿಗೆ ವ್ಯವಸ್ಥೆಯಿಂದ ಬರುವ ಆದಾಯವು ದೇಶದ ಆದಾಯದಲ್ಲಿ  ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ ನಮ್ಮ ಕಾಂಗ್ರೆಸ್ ಸರ್ಕಾರ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ನಗರದ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.1ರಲ್ಲಿ ಹೊಸದುರ್ಗ ರಸ್ತೆಯಿಂದ ವಾಣಿವಿಲಾಸಸಾಗರ ಲೇಔಟ್ ರಂಗಪ್ಪನ ಮನೆಯವರೆಗೆ ಸುಮಾರು 10 ಲಕ್ಷ ರೂಗಳ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು  ಮಾತನಾಡಿದರು.

ನಗರದ ಮೂಲಸೌಕರ್ಯ ಅಭಿವೃದ್ಧಿಯ ದಿಶೆಯಲ್ಲಿ ಈ ಯೋಜನೆ ಮಹತ್ತರ ಹೆಜ್ಜೆಯಾಗಲಿದೆ. ನಾಗರೀಕರ ಅನುಕೂಲಕ್ಕೆ ಮತ್ತು ಸುಗಮ ಸಂಚಾರಕ್ಕಾಗಿ ಈ ಕಾಮಗಾರಿ ಶೀಘ್ರ ಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ  ನಗರಸಭೆ ಅಧ್ಯಕ್ಷರಾದ ಬಾಲಕೃಷ್ಣ,  ಪೌರಾಯುಕ್ತರಾದ ಎ.ವಾಸೀಂ,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್, ಕಾಂಗ್ರೆಸ್ ಮುಖಂಡರಾದ  ಗಿಡ್ಡೋಬನಹಳ್ಳಿಅಶೋಕ್,  ಕಲ್ಲಹಟ್ಟಿ ಹರೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *