
ಹಿರಿಯೂರು :
ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರಿಂದ ಹಿಂದೂ ಮಹಾಗಣಪತಿ ಮಹೋತ್ಸವದ ವತಿಯಿಂದ ಬೃಹತ್ ಬೈಕ್ ರ್ಯಾಲಿ ಕಾರ್ಯಕ್ರಮವನ್ನು ನೂರಾರು ಜನ ಹಿಂದೂ ಕಾರ್ಯಕರ್ತರು ಸೇರಿ ಅದ್ದೂರಿಯಾಗಿ ನೆರವೇರಿಸಿದರು.
ಈ ಬೈಕ್ ರ್ಯಾಲಿಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಕೇಸರಿ ಬಾವುಟವನ್ನು ಹಿಡಿದು, ಜೈಶ್ರೀರಾಮ್ ಎಂಬ ಘೋಷಣೆಯೊಂದಿಗೆ ಬೈಕ್ ನಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.
