

ಹಿರಿಯೂರು:
ನಗರದ ಲಕ್ಕವ್ವನಹಳ್ಳಿ ರಸ್ತೆಯಲ್ಲಿರುವ ಕು೦ಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಕಛೇರಿಯಲ್ಲಿ ಅಧ್ಯಕ್ಷರಾದ ಪ್ರೊಫೆಸರ್ ಮೈಸೂರು ಶಿವಣ್ಣರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 7ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಸರಿಯಾಗಿ ಸರ್ವ ಸದಸ್ಯರಿಗೆ ಸಭೆ ಕರೆಯಲಾಗಿದೆ ಎಂಬುದಾಗಿ ತಾಲ್ಲೂಕು ಕುಂಚಿಟಿಗರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಕೆ.ಜಿ.ಹನುಮಂತರಾಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಸಭೆಯಲ್ಲಿ ಜನಗಣತಿ ಬಗ್ಗೆ, 2026ರ ಕ್ಯಾಲೆ೦ಡರ್ ಬಗ್ಗೆ, ಸಾಮೂಹಿಕ ಸತ್ಯನಾರಾಯಣ ಪೂಜೆ ಬಗ್ಗೆ, ಹಿರಿಯ ನಾಗರೀಕರಿಗೆ ಗೌರವ ಸಮರ್ಪಣೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಆದ್ದರಿಂದ ಎಲ್ಲಾ ಸದಸ್ಯರು ಸಮಯಕ್ಕೆ ಸರಿಯಾಗಿ ಹಾಜರಾಗುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.