
ಹಿರಿಯೂರು :
ತಾಲ್ಲೂಕಿನ ಖಂಡೇನಹಳ್ಳಿ ಗ್ರಾಮಕ್ಕೆ ಪೌರಾಡಳಿತ ಸಚಿವರಾದ ಸನ್ಮಾನ್ಯ ಹೆಚ್.ಸಿ.ಬಾಲಕೃಷ್ಣರವರು ಭೇಟಿ ನೀಡಿ, ಅವರೊಂದಿಗೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಲಾಯಿತು. ಬಳಿಕ ಸ್ಥಳೀಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸುಹಾಸ್ ಸುಧಾಕರ್, ತಾಲ್ಲೂಕು ಕಾಂಗ್ರೆಸ್ ಅದ್ಯಕ್ಷರಾದ ಈರಲಿಂಗೇಗೌಡ, ಜಿ.ಪಂ.ಮಾಜಿ ಅಧ್ಯಕ್ಷರಾದ ಬಿ.ಎಸ್.ರಘುನಾಥ್, ಕಾಂಗ್ರೆಸ್ ಮುಖಂಡರಾದ ಬಿ.ಹೆಚ್.ಮಂಜುನಾಥ್, ಹರಿಯಬ್ಬೆ ಮಹಂತೇಶ್, ಸೇರಿದಂತೆ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
