October 6, 2026
00001

ಹಿರಿಯೂರು:

ಬ್ರಿಟಿಷರ ದಾಸ್ಯದಲ್ಲಿದ್ದ ಭಾರತ ದೇಶವನ್ನು ಬಿಡುಗಡೆಗೊಳಿಸಲು ಅಹಿಂಸೆ ಹಾಗೂ ಸತ್ಯಾಗ್ರಹದ ಮೂಲಕ ಹೋರಾಟ ನಡೆಸಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಂತಹ ಕೀರ್ತಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಲ್ಲುತ್ತದೆ ಎಂಬುದಾಗಿ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಬಿ .ಆರ್. ಹೇಮಲತಾ ಹೇಳಿದರು.

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿರವರ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ನಂತರ ಅವರು ಮಾತನಾಡಿದರು.

ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ, ಹಾಗೂ ಸ್ವಚ್ಛತೆಯ ಅರಿವು ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಹಾಗೆ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯನ್ನು ವಿಶ್ವ ಅಹಿಂಸಾ ದಿನಾಚರಣೆಯನ್ನಾಗಿ ವಿಶ್ವದಲ್ಲೆಡೆ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಆರ್.ಗಂಗಾಧರ್ ಮಾತನಾಡಿ,  ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹಾಗೂ ಸಮಾಜದಲ್ಲಿ ಶಾಂತಿ, ಸಹಬಾಳ್ವೆ  ಸೌಹಾರ್ದತೆಯನ್ನು ಸಮಾಜದಲ್ಲಿ ಬೆಳೆಸುವಲ್ಲಿ ಗಾಂಧೀಜಿಯವರ ಪಾತ್ರ ಬಹು ಮುಖ್ಯವಾಗಿದೆ ಎಂಬುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಆರ್.ವಲಿ. ಐಕ್ಯೂ.ಎಸ್ ಸಿ, ಸಂಚಾಲಕ ಮಹಮ್ಮದ್ ಸಾದತ್,ಕೆ.ಎಚ್. ಮಹಾಂತೇಶ್ ಬಿ.ಟಿ.ಭರತ್, ವೀರೇಶ್  ಮಲ್ಲಿಕಾರ್ಜುನಗೌಡ ಅಧೀಕ್ಷಕ, ನರಸಿಂಹ ಮೂರ್ತಿ .ದೈಹಿಕ ಶಿಕ್ಷಣ ನಿರ್ದೇಶಕ  ಜಿ.ವಿ.ಶ್ರೀಧರ್ ಯಾದವ್. ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *