October 6, 2026
00008

ಹಿರಿಯೂರು:

ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ. ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳ ಜೀವನ, ಅಹಿಂಸೆ, ಸತ್ಯ, ಶಾಂತಿ, ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿರುತ್ತವೆ ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ರಾದ ಸಿದ್ದೇಶ್ ಅವರು ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಂಧೀಜಿ, ಶಾಸ್ತ್ರೀಜಿ ಅವರು ದೇಶದಲ್ಲಿ ಜಾತಿರಹಿತ, ವರ್ಗರಹಿತ ಸಮಾಜ ಕಟ್ಟುವ ವಿಶ್ವಾಸ ಹೊಂದಿದ್ದರು. ಕೆಳಸ್ತರದ ಹರಿಜನರನ್ನು ದೇವರ ಮಕ್ಕಳು ಎಂದು ಕರೆದ ಗಾಂಧೀಜಿ, ಸ್ವದೇಶಿ ಉತ್ಪನ್ನಗಳನ್ನು ಬಳಸಬೇಕು, ವಿದೇಶಿ ವಸ್ತುಗಳನ್ನು ಬಹಿಷ್ಕರಿಸಿ ಎಂದು ಕರೆನೀಡಿ ದೇಶಪ್ರೇಮ ಮೆರೆದರು ಎಂಬುದಾಗಿ ಅವರು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ತಹಶೀಲ್ದಾರ್ ರಾದ ಸಿದ್ದೇಶ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪತಹಶೀಲ್ದಾರರಾದ ತಿಪ್ಪೇಸ್ವಾಮಿ, ಸೀಮಾ, ರಮೇಶ್, ವೆಂಕಟೇಶ್, ಬಸವರಾಜ್, ವೆಂಕಟೇಶ್, ಮಧು, ಟಿ.ಶ್ರೀನಿವಾಸರೆಡ್ಡಿ, ಕಾರ್ತಿಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *