
ಹಿರಿಯೂರು :
ತಾಲ್ಲೂಕಿನ ಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಜನರೊಂದಿಗೆ ನಿರಂತರ ಸಂಪರ್ಕ, ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಲಾಗುತ್ತಿದೆ ಎಂಬುದಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಸುಹಾಸ್ ಸುಧಾಕರ್ ಹೇಳಿದರು.
ತಾಲ್ಲೂಕಿನ ಭರಂಪುರ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಗ್ರಾಮದ ಅಭಿವೃದ್ಧಿ, ಸ್ಥಳೀಯ ಸಮಸ್ಯೆಗಳು ಹಾಗೂ ಸಾರ್ವಜನಿಕರ ಅಗತ್ಯಗಳ ಕುರಿತು ಮಾಹಿತಿ ಪಡೆದರು.
ಗ್ರಾಮಸ್ಥರ ಅಭಿಪ್ರಾಯಗಳು, ಸಲಹೆಗಳು ಹಾಗೂ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು.
