October 27, 2026
00002

ಹಿರಿಯೂರು :

ನಮ್ಮ ಬಿಜೆಪಿ ಪಕ್ಷದವರಿಗೆ ದೇಶಪ್ರೇಮ, ರಾಷ್ಟ್ರಭಕ್ತಿ ಇಲ್ಲ, ಸಂವಿಧಾನ ವಿರೋಧಿಯಾಗಿರುವ ಈ ಪಕ್ಷವನ್ನು ಜನರು ಹಿರಿಯೂರು ಉಪಚುನಾವಣೆಯಲ್ಲಿ ಸೋಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರದಲ್ಲಿ ಹಿರಿಯೂರು ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಹಿರಿಯೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಈ ಸಭೆಯನ್ನು ಆಯೋಜಿಸಲಾಗಿದೆ ಎಂದರಲ್ಲದೆ,

ಅಭ್ಯರ್ಥಿ ಆಯ್ಕೆಗೆ ನಾನು ಬಂದಿಲ್ಲ, ಅಭ್ಯರ್ಥಿ ಆಯ್ಕೆ ಬಗ್ಗೆ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೊಂದಿಗೆ ಚರ್ಚಿಸಿ, ನಂತರ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂಬುದಾಗಿ ಹೇಳಿದರು.

ಉಪಚುನಾವಣೆಗೆ ಜಿಲ್ಲಾ ಪಂಚಾಯಿತಿ ಕ್ಷೇತ್ರವಾರು ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ಕೆಲವು ಹೋಬಳಿಗಳಿಗೆ ಹಬ್ಬದ ನಂತರ ಮುಖಂಡರು ಬರಲಿದ್ದಾರೆ, ಪದವೀಧರರ ವಿಶ್ವಾಸ ಗಳಿಸುವ ಮೂಲಕ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿಯೂ ಸಹ ಗೆಲುವು ಸಾಧಿಸಬೇಕು, ಈ ಮೂಲಕ ನಮ್ಮ ಪಕ್ಷ ಸಧೃಢವಾಗಿದೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಎಸ್.ಐ.ಆರ್ ಪ್ರಕ್ರಿಯೆ ಬಗ್ಗೆ ಎಚ್ಚರದಿಂದ ಇರಬೇಕು, ಕೈ ಬಿಟ್ಟು ಹೋಗಿರುವ ಮತದಾರರನ್ನು ಮರುಸೇರ್ಪಡೆ ಮಾಡಬೇಕು ನಮ್ಮ ಪಕ್ಷ ಸಂವಿಧಾನದ ಆಶಯದಂತೆ ಶಿಕ್ಷಣ ಉದ್ಯೋಗ ಆಹಾರ ವಸತಿ ಜೊತೆಗೆ ಮತದಾನದ ಹಕ್ಕನ್ನು ಪ್ರತಿಯೊಬ್ಬರಿಗೆ ನೀಡಬೇಕೆಂಬ ಸಿದ್ಧಾಂತಕ್ಕೆ ಬದ್ಧವಾಗಿದೆ ಕೆಲವರ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಬಿಜೆಪಿ ಸಂಜು ನಡೆಸುತ್ತಿರುವುದು ದೇಶದ ಜನರ ಮುಂದೆ ಬಯಲಾಗಿದೆ ಎಂಬುದಾಗಿ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಮಾತನಾಡಿ, ಮುಂಬರುವ 2028 ರಲ್ಲಿ ರಾಜ್ಯದ ಚುನಾವಣೆಯಲ್ಲಿ, ಹಾಗೂ 2029ರಲ್ಲಿ ಕೇಂದ್ರದ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕಿದೆ ಎಂಬುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಡಿ.ಸುಧಾಕರ್ ರವರ ಪುತ್ರ ಸುಹಾಸ್ ಸುಧಾಕರ್ ರವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕೆಂದು ಎಷ್ಟು ಜನ ಒತ್ತಾಯಿಸುತ್ತೀರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣರವರು ಪ್ರಶ್ನಿಸಿದಾಗ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕೈಯೆತ್ತುವ ಮೂಲಕ ಬೆಂಬಲ ಸೂಚಿಸಿದರು.

ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಶಾಸಕರಾದ ಬಿ.ಜಿ.ಗೋವಿಂದಪ್ಪ, ಶಾಸಕಿ ರೂಪಶಶಿಧರ್, ಮಾಜಿ ಶಾಸಕ ಉಮಾಪತಿ, ತಾಜ್ ಪೀರ್ ಮಾತನಾಡಿದರು.

ಈ ಸಭೆಯಲ್ಲಿ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ಮುಖಂಡರಾದ ಪೂರ್ಣಿಮಾ ಶ್ರೀನಿವಾಸ್, ಜಿ.ಎಸ್.ಮಂಜುನಾಥ್, ಸಿ.ಬಿ.ಪಾಪಣ್ಣ, ಆರ್.ಮಂಜುನಾಥ್, ಸುಹಾಸ್ ಸುಧಾಕರ್, ಶಕೀಲ್ ನವಾಜ್, ಬಿ.ಎಚ್.ಮಂಜುನಾಥ್ ಇತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *