
ಹಿರಿಯೂರು :
ನಗರದ ನೆಹರು ಮೈದಾನದಲ್ಲಿರುವ ರೋಟರಿ ಭವನದಲ್ಲಿ ಚಿತ್ರದುರ್ಗ ಜಿಲ್ಲೆ ಪೊಲೀಸ್ ಹಿರಿಯೂರು ಉಪವಿಭಾಗ ಪೊಲೀಸ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮುಖಂಡರಾದ ಡಿ.ವೈ.ಎಸ್.ಪಿ ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿತ್ತು.
ಗ್ರಾಮಾಂತರ ಪೊಲೀಸ್ ಠಾಣೆಯ ಸಿ.ಪಿ.ಐ ಚಂದ್ರಶೇಖರ್ ರವರು ಹಾಗೂ ನಗರ ಪೊಲೀಸ್ ಠಾಣೆಯ ಸಿಪಿಐ ಮೊಹಮ್ಮದ್ ಸಿರಾಜ್ ರವರು ಹಾಗೂ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಶಶಿಕಲಾ ರವರು ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕೆ.ರಾಮಚಂದ್ರ, ಜಿಲ್ಲಾ ಉಪಾಧ್ಯಕ್ಷರುಗಳಾದ ಲಕ್ಷ್ಮಣರಾವ್, ಕೆಂಚಪ್ಪ ಆಟೋ, ಹಿರಿಯೂರು ತಾಲೂಕು ಕಾರ್ಯಾಧ್ಯಕ್ಷರಾದ ರಂಗಸ್ವಾಮಿ ಆಟೋ, ಹಿರಿಯೂರು ನಗರ ಅಧ್ಯಕ್ಷರಾದ ದಿಲೀಪ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
