October 28, 2026
002

ಹಿರಿಯೂರು :

ನನ್ನ ತಂದೆಯವರು ಹಾಗೂ ಮಾಜಿ ಸಚಿವರಾದ ದಿ.ಡಿ.ಸುಧಾಕರ್ ರವರ ಆಶಯದಂತೆ ಹಿರಿಯೂರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಮುಂಬರುವ ಉಪಚುನಾವಣೆಯಲ್ಲಿ ನನ್ನ ಪರವಾಗಿ ಮತ ಚಲಾಯಿಸಿ ಬೆಂಬಲ ಹಾಗೂ ಆಶೀರ್ವಾದ ನೀಡಬೇಕು ಎಂಬುದಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾದ ಸುಹಾಸ್ ಸುಧಾಕರ್ ಮತದಾರರಲ್ಲಿ ಮನವಿ ಮಾಡಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿ, ಯಲ್ಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂದಿಗನಡು ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ, ನಂತರ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಗ್ರಾಮದ ಮೂಲಸೌಕರ್ಯ, ಸಾರ್ವಜನಿಕ ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಅಗತ್ಯಗಳ ಕುರಿತು ಅವರ ಅಭಿಪ್ರಾಯಗಳನ್ನು ಆಲಿಸಿದರು.

About The Author

Leave a Reply

Your email address will not be published. Required fields are marked *