March 2, 2026
00007

ಹಿರಿಯೂರು:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಆಯೋಜನೆಗೊಂಡಿರುವ ಸಮೀಕ್ಷಾ ಕಾರ್ಯವನ್ನು ನಗರದ 10ನೇ ವಾರ್ಡಿನ ನಾಗರೀಕರು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ನಿಜಕ್ಕೂ ಸಂತಸದ ವಿಚಾರ ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ಸಿದ್ದೇಶ್ ಹೇಳಿದರು.

ನಗರದ 10ನೇ ವಾರ್ಡಿನ ನಾಗರೀಕರು ಜಾತಿಗಣತಿ ಯಶಸ್ವಿಗೊಳಿಸಿರುವ ಕಾರಣಕ್ಕಾಗಿ 10 ನೇ ವಾರ್ಡ್ ನ ಕೌನ್ಸಿಲರ್  ಹಾಗೂ ನಗರಸಭೆ ಅಧ್ಯಕ್ಷರಾದ ಆರ್.ಬಾಲಕೃಷ್ಣರವರು ತಮ್ಮ ವಾರ್ಡಿನ ಜನರಿಗೆ ಹಮ್ಮಿಕೊಂಡಿದ್ದ ಸಿಹಿ ವಿತರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ನಂತರ ಅವರು ಮಾತನಾಡಿದರು.

ಈ ಸಂಧರ್ಭದಲ್ಲಿ ತಾಲ್ಲೂಕು ತಹಶೀಲ್ದಾರ್ ಸಿದ್ದೇಶ್,  ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ನಗರಸಭೆ ಅಧ್ಯಕ್ಷರಾದ ಆರ್.ಬಾಲಕೃಷ್ಣ  ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರು, ನಗರಸಭಾ ಗೌರವಾನ್ವಿತ ಸದಸ್ಯರುಗಳು ಹಾಗೂ ಮತ್ತು ಹಿರಿಯ-ಕಿರಿಯ ಆರೋಗ್ಯ ನಿರೀಕ್ಷಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *