March 2, 2026
00006

ಹಿರಿಯೂರು:     

ವ್ಯಕ್ತಿಯು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಶಿಕ್ಷಣವು ಅತ್ಯಂತ ಸಹಕಾರಿಯಾಗಿದ್ದು, ಶಿಕ್ಷಣ ರಹಿತ ಸಮಾಜದ ಅಭಿವೃದ್ದಿಯನ್ನು ಊಹಿಸಿಕೊಳ್ಳುವುದು ಅಸಾಧ್ಯ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ತಾಲ್ಲೂಕಿನ ದೇವರಕೊಟ್ಟ ಮೊರಾರ್ಜಿ ವಸತಿ ಶಾಲೆಯ ಆವರಣದಲ್ಲಿ ನೂತನ ಹಿಂದುಳಿದ ವರ್ಗಗಳ ಪದವಿ ಪೂರ್ವ ವಸತಿ ಕಾಲೇಜಿನ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳ ಸುಸ್ಥಿರ ಭವಿಷ್ಯಕ್ಕಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ, ಸಮಾಜದ ಉತ್ತಮ ಪ್ರಜೆಯಾಗಿ ಹೊರಹೊಮ್ಮಬೇಕಿದೆ ಎಂಬುದಾಗಿ ಅವರು ಹೇಳಿದರು.

ಇದೇ  ಸಂದರ್ಭದಲ್ಲಿ ಮೊರಾರ್ಜಿ ವಸತಿ ಶಾಲೆಯ ಮಕ್ಕಳ ದಿನನಿತ್ಯದ ಆಹಾರ ವ್ಯವಸ್ಥೆ ಹಾಗೂ ದಿನನಿತ್ಯ ಉಪಯೋಗದ ಸಾಮಗ್ರಿಗಳನ್ನು ಪರಿಶೀಲಿಸಿ ಮಕ್ಕಳ ಕಲ್ಯಾಣದ ಬಗ್ಗೆ ಮಾಹಿತಿಯನ್ನು ಅವರು  ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಮುಖಂಡರುಗಳು, ಹಾಗೂ ಕಾರ್ಯಕರ್ತರು, ಶಾಲಾ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *