March 2, 2026
05

ಹಿರಿಯೂರು :

ತಾಲ್ಲೂಕಿನ ಸ್ವಾಭಿಮಾನ ವಸತಿ ಶಾಲೆಯ ವಿದ್ಯಾರ್ಥಿಗಳು 17 ವರ್ಷ ವಯೋಮಿತಿಯ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿ, ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಜೊತೆಗೆ ಇದೇ ಶಾಲೆಯ 14 ವರ್ಷ ವಯೋಮಿತಿಯ ಬಾಲಕರು ಬಾಲ್ ಬ್ಯಾಡ್ಮಿಟನ್ ನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ಬೆಂಗಳೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರು ವಿಭಾಗಮಟ್ಟಕ್ಕೆ ಆಯ್ಕೆಯಾದ ಸ್ವಾಭಿಮಾನ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಚಿದಾನಂದ್ ರವರು ಬಹುಮಾನ ನೀಡಿ, ಅಭಿನಂದಿಸಿ, ಬೆಂಗಳೂರು ವಿಭಾಗ ಮಟ್ಟದಲ್ಲಿಯೂ ಪ್ರಥಮ ಸ್ಥಾನ ಪಡೆಯುವಂತೆ ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *