March 2, 2026
01

ಹಿರಿಯೂರು:

ಮಹರ್ಷಿ ವಾಲ್ಮೀಕಿಯವರು ಸತ್ಯ, ಧರ್ಮ ಮತ್ತು ಮಾನವೀಯತೆಯ ಪ್ರತೀಕವಾಗಿದ್ದು,  ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಸಾರಿದ ತತ್ವ ಹಾಗೂ ಆದರ್ಶಗಳು ನಮ್ಮ ಸಮಾಜಕ್ಕೆ ದಾರಿದೀಪವಾಗಿವೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ  ಗಾಂಧಿ ಸರ್ಕಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿಯವರ ಪುತ್ಥಳಿಗೆ ಪುಷ್ಪಾರ್ಚನೆಯನ್ನು ಸಲ್ಲಿಸಿ, ನಂತರ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿಯವರು ರಾಮಾಯಣದಲ್ಲಿ ಪರಿಚಯಿಸಿದ ಪಾತ್ರಗಳು ನಮ್ಮ ಜೀವನಕ್ಕೆ ಸ್ಪೂರ್ತಿಯಾಗಿದ್ದು, ಇಂದಿನ ಯುವಪೀಳಿಗೆ ರಾಮಾಯಣದಂತಹ ಮಹಾಕಾವ್ಯವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕಲ್ಲದೆ, ಅದನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರುಗಳು ಹಾಗೂ ಕಾಂಗ್ರೆಸ್ ಮುಖಂಡರು ಪಕ್ಷದ ಕಾರ್ಯಕರ್ತರು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *