April 21, 2026
02

ಹಿರಿಯೂರು:     

ಉತ್ತಮ ಗುಣಮಟ್ಟದ ಬೀಜಗಳು, ಆಧುನಿಕ ತಂತ್ರಜ್ಞಾನ ಮತ್ತು ನೀರಾವರಿ ಸೌಲಭ್ಯಗಳ ಮೂಲಕ ನಮ್ಮ ರೈತರ ಬದುಕು ಸುಧಾರಿಸುವ ದಿಸೆಯಲ್ಲಿ ನಿರಂತರ ಪ್ರಯತ್ನ ನಡೆಯುತ್ತಿದ್ದು, ರೈತರ ಅಭಿವೃದ್ಧಿ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಸದಾಬದ್ಧವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ಕೃಷಿಇಲಾಖೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತರಿಗೆ ಕಡಲೆ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರೈತರಿಗೆ ಕಡಲೆ ಬೀಜ ಹಾಗೂ ಸ್ಪ್ರಿಂಕ್ಲರ್ ಉಪಕರಣಗಳನ್ನು ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ರೈತರು, ಕಾಂಗ್ರೆಸ್ ಮುಖಂಡರು ಪಕ್ಷದ ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *