
ಹಿರಿಯೂರು:
ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡುವುದು ನಮ್ಮ ಸರ್ಕಾರದ ಬದ್ಧತೆಯಾಗಿದ್ದು, ಜನರ ಧ್ವನಿ ನಮ್ಮ ಕಾರ್ಯದ ದಿಕ್ಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಪರಿಹಾರವನ್ನು ನೀಡುವಂತೆ ಸೂಚನೆ ನೀಡಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

